ಯೋಗೀಶಗೌಡ ಕೊಲೆ ಪ್ರಕರಣವು ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಪ್ರಮುಖ ಪ್ರಕರಣಗಳಲ್ಲಿ ಒಂದಾಗಿದೆ. ಈ ಪ್ರಕರಣದಲ್ಲಿ ಇತ್ತೀಚೆಗೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಧಾರವಾಡ ವಿಧಾನಸಭಾ ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಇದೀಗ ಸೆಷನ್ಸ್ ಕೋರ್ಟ್ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಗೆ ಸಂಬಂಧಿಸಿದ ವಿಶೇಷ ನ್ಯಾಯಾಲಯವು ನೀಡಿದ ತೀರ್ಪಿನ ವಿರುದ್ಧ ಈ ಮೇಲ್ಮನವಿ ಸಲ್ಲಿಕೆಯಾಗಿದ್ದು, ರಾಜಕೀಯ ಹಾಗೂ ಕಾನೂನು ವಲಯದಲ್ಲಿ ಮತ್ತೆ ಚರ್ಚೆಗೆ ಕಾರಣವಾಗಿದೆ.
ಸೆಷನ್ಸ್ ಕೋರ್ಟ್ ತೀರ್ಪು ಏನು?
ಶಾಸಕರು ಮತ್ತು ಸಂಸದರು ಸೇರಿದಂತೆ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಗೆ ವಿಶೇಷವಾಗಿ ರಚಿಸಲಾದ ಸೆಷನ್ಸ್ ಕೋರ್ಟ್‌ನಲ್ಲಿ ಈ ಪ್ರಕರಣದ ವಿಚಾರಣೆ ನಡೆದಿತ್ತು. ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರು ಪ್ರಕರಣದ ಎಲ್ಲ ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ಮಹತ್ವದ ತೀರ್ಪು ನೀಡಿದ್ದರು.
ಈ ತೀರ್ಪಿನಲ್ಲಿ ಒಟ್ಟು 17 ಮಂದಿನ್ನು ಅಪರಾಧಿಗಳೆಂದು ನ್ಯಾಯಾಲಯ ಘೋಷಿಸಿತ್ತು. ಇವರಲ್ಲಿ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಲಾಗಿತ್ತು. ಈ ತೀರ್ಪು ರಾಜ್ಯದ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತ. ವಿನಯ್ ಕುಲಕರ್ಣಿ ಸೇರಿದಂತೆ ಆರೋಪಿಗಳ ವಿರುದ್ಧ ನೀಡಲಾದ ಈ ತೀರ್ಪು ಹಲವು ರಾಜಕೀಯ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿತ್ತು.
ಹೈಕೋರ್ಟ್ಗೆ ಮೇಲ್ಮನವಿ
ಈಗ ವಿನಯ್ ಕುಲಕರ್ಣಿ ಅವರು ಸೆಷನ್ಸ್ ಕೋರ್ಟ್ ತೀರ್ಪಿನ ವಿರುದ್ಧ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಶಿಕ್ಷೆಗೆ ತಡೆ ಹಾಗೂ ಜಾಮೀನು ಕೋರಿ ಅರ್ಜಿಯನ್ನು ಸಲ್ಲಿಸಲಾಗಿದೆ.
ವಿಶೇಷ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ಈ ಅರ್ಜಿಗಳು ಇನ್ನಷ್ಟೇ ವಿಚಾರಣೆಗೆ ಬರಬೇಕಿದ್ದು, ಹೈಕೋರ್ಟ್ ಯಾವ ರೀತಿಯ ತೀರ್ಮಾನ ಕೈಗೊಳ್ಳಲಿದೆ ಎಂಬುದರ ಮೇಲೆ ಎಲ್ಲರ ಗಮನ ನೆಟ್ಟಿದೆ ಈ ಮೇಲ್ಮನವಿಯಲ್ಲಿ ವಿನಯ್ ಕುಲಕರ್ಣಿ ಪರವಾಗಿ ಹೈಕೋರ್ಟ್ ವಕೀಲ ಎಸ್. ಸುನಿಲ್ ಕುಮಾರ್ ವಕಾಲತ್ತು ವಹಿಸಿದ್ದಾರೆ.
ಪ್ರಕರಣದ ಹಿನ್ನೆಲೆ
ಯೋಗೀಶಗೌಡ ಅವರು ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದರು. ಅವರ ಕೊಲೆ ಪ್ರಕರಣ ಹಲವು ವರ್ಷಗಳಿಂದ ರಾಜಕೀಯ ಸಂಚಲನಕ್ಕೆ ಕಾರಣವಾಗಿತ್ತು.
ಈ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಹೆಸರು ಕೇಳಿಬಂದಾಗ ರಾಜ್ಯ ರಾಜಕೀಯದಲ್ಲಿ ದೊಡ್ಡ ಮಟ್ಟದ ಚರ್ಚೆ ಆರಂಭವಾಗಿತ್ತು. ಪ್ರಕರಣದ ತನಿಖೆ, ಸಾಕ್ಷ್ಯ ಸಂಗ್ರಹ, ನ್ಯಾಯಾಲಯದ ವಿಚಾರಣೆ—ಎಲ್ಲವೂ ಸಾಕಷ್ಟು ಗಮನ ಸೆಳೆದಿದ್ದವು.
ಯೋಗೀಶಗೌಡ ಕೊಲೆ ಪ್ರಕರಣವು ಸಾಮಾನ್ಯ ಕ್ರಿಮಿನಲ್ ಪ್ರಕರಣವಷ್ಟೇ ಅಲ್ಲದೆ, ರಾಜಕೀಯ ಪ್ರಭಾವ ಹೊಂದಿದ ಪ್ರಕರಣವಾಗಿರುವುದರಿಂದ ಸಾರ್ವಜನಿಕರ ಆಸಕ್ತಿಯೂ ಹೆಚ್ಚಿತ್ತು.
ಈ ಪ್ರಕರಣದ ತೀರ್ಪಿನ ನಂತರ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಪಗಳು ಜೋರಾಗಿದ್ದವು. ಬಿಜೆಪಿ ನಾಯಕರು ನ್ಯಾಯಾಲಯದ ತೀರ್ಪು ಸತ್ಯದ ಜಯ ಎಂದು ಹೇಳಿದರೆ, ಕಾಂಗ್ರೆಸ್ ಪಕ್ಷದ ಕೆಲ ನಾಯಕರು ಕಾನೂನು ಹೋರಾಟ ಮುಂದುವರಿಯಲಿದೆ ಎಂದು ಪ್ರತಿಕ್ರಿಯೆ ನೀಡಿದ್ದರು. ಈಗ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿರುವುದರಿಂದ ಪ್ರಕರಣ ಮತ್ತೊಮ್ಮೆ ರಾಜಕೀಯ ಚರ್ಚೆಯ ಕೇಂದ್ರಬಿಂದುವಾಗಿದೆ.
ಮುಂದೇನು?
ಹೈಕೋರ್ಟ್‌ನಲ್ಲಿ ಜಾಮೀನು ಹಾಗೂ ಶಿಕ್ಷೆಗೆ ತಡೆ ಕೋರಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಯಬೇಕಿದೆ. ನ್ಯಾಯಾಲಯದ ಮುಂದಿನ ಆದೇಶವೇ ಪ್ರಕರಣದ ಭವಿಷ್ಯವನ್ನು ನಿರ್ಧರಿಸಲಿದೆ.ಹೈಕೋರ್ಟ್ ತೀರ್ಪು ವಿನಯ್ ಕುಲಕರ್ಣಿ ಅವರ ರಾಜಕೀಯ ಭವಿಷ್ಯದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ಇದೇ ಕಾರಣಕ್ಕೆ ಈ ಪ್ರಕರಣದ ಮೇಲೆ ರಾಜ್ಯದ ರಾಜಕೀಯ ವಲಯದ ಕಣ್ಣಿದೆ>
ಜನರ ಕುತೂಹಲ ಹೆಚ್ಚಿಸಿದ ಪ್ರಕರಣ
ಯೋಗೀಶಗೌಡ ಕೊಲೆ ಪ್ರಕರಣವು ಆರಂಭದಿಂದಲೇ ಜನರ ಗಮನ ಸೆಳೆದ ಪ್ರಕರಣವಾಗಿದೆ. ಪ್ರಭಾವಿ ರಾಜಕೀಯ ನಾಯಕರ ಹೆಸರು ಕೇಳಿಬಂದಿದ್ದರಿಂದ ಈ ಪ್ರಕರಣದ ಪ್ರತಿಯೊಂದು ಬೆಳವಣಿಗೆಯೂ ಸುದ್ದಿಯಾಗಿದೆ.
ಈಗ ಹೈಕೋರ್ಟ್‌ಗೆ ಸಲ್ಲಿಸಿರುವ ಮೇಲ್ಮನವಿಯೊಂದಿಗೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಮುಂದಿನ ವಿಚಾರಣೆ ಮತ್ತಷ್ಟು ಕುತೂಹಲ ಹೆಚ್ಚಿಸಿದೆ.
ರಾಜಕೀಯ, ಕಾನೂನು ಮತ್ತು ಸಾರ್ವಜನಿಕ ವಲಯ—ಮೂರೂ ಕ್ಷೇತ್ರಗಳ ಗಮನ ಈಗ ಹೈಕೋರ್ಟ್ ತೀರ್ಪಿನತ್ತ ನೆಟ್ಟಿದೆ.
ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ‘ದೀದಿ’ ಎಂದೇ ಖ್ಯಾತರಾದ ಮಮತಾ ಬ್ಯಾನರ್ಜಿ ಅವರು ಇಂದು ತಮ್ಮ ರಾಜಕೀಯ ಜೀವನದ ಅತ್ಯಂತ ಕಠಿಣ ಹಂತದಲ್ಲಿದ್ದಾರೆ. ಪಶ್ಚಿಮ ಬಂಗಾಳದ ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಮಮತಾ ಬ್ಯಾನರ್ಜಿ ಅವರು ಎದುರಿಸುತ್ತಿರುವ ಸವಾಲುಗಳು ಈ ಹಿಂದಿಗಿಂತಲೂ ಭಿನ್ನ ಮತ್ತು ಸಂಕೀರ್ಣ. ಇಷ್ಟೆಲ್ಲಾ ಸವಾಲುಗಳಿದ್ದರೂ ಮಮತಾ ಬ್ಯಾನರ್ಜಿ ಅವರಲ್ಲಿರುವ ಅತಿದೊಡ್ಡ ಶಕ್ತಿ ಅವರ ‘ಪರ್ಸನಲ್ ಬ್ರ್ಯಾಂಡ್’ ಮೂಲಕವೇ ಚುಣಾವಣೆಯನ್ನು ಎದುರಿಸುತ್ತಿದಾರೆ